Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣ್ಣೂರು: ನಿಂತಿದ್ದ ರೈಲಿನಲ್ಲಿ ಬೆಂಕಿ – ಕಿಡಿಗೇಡಿಗಳ ಕೃತ್ಯದ ಶಂಕೆ
    ಇತ್ತೀಚಿನ ಸುದ್ದಿ

    ಕಣ್ಣೂರು: ನಿಂತಿದ್ದ ರೈಲಿನಲ್ಲಿ ಬೆಂಕಿ – ಕಿಡಿಗೇಡಿಗಳ ಕೃತ್ಯದ ಶಂಕೆ

    June 1, 2023
    Share

    ಕಣ್ಣೂರು: ಕಣ್ಣೂರು ಸ್ಟೇಷನ್‌ನಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ.

    ಗುರುವಾರ ಮುಂಜಾನೆ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ಕಾಣಿಸಿಕೊಂಡ ರೈಲಿನ ಇತರ ಬೋಗಿಗಳನ್ನು ಬೇರ್ಪಡಿಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಆದರೆ ಯಾವುದೇ ಜೀವ ಅಪಾಯ ಸಂಭವಿಸಿರಲಿಲ್ಲಈ ಕುರಿತು ಪೊಲೀಸರು ಪಕ್ಕದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ಅಪರಿಚಿತ ವ್ಯಕ್ತಿಯೊಬ್ಬ ರೈಲಿನೊಳಗೆ ಪ್ರವೇಶಿಸಿದ ಬಳಿಕ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೀಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.ಇದೇ ವರ್ಷ ಏ.2 ರಂದು ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾರುಖ್ ಸೈಫಿ ಎಂಬಾತ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಯುತ್ತಿದೆ.

    Post Views: 169

    Related Posts

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.