Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಬರ್ಬರ ಹತ್ಯೆ
    ಇತ್ತೀಚಿನ ಸುದ್ದಿ

    ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಬರ್ಬರ ಹತ್ಯೆ

    June 4, 2023
    Share

    ಚಿಕ್ಕಮಗಳೂರು: ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಯುವಕನೊಬ್ಬ ಬರ್ಬರ ಹತ್ಯೆಯಾಗಿರುವ ಆತಂಕಕಾರಿ ಘಟನೆ ತರೀಕೆರೆ ಪಟ್ಟಣದಲ್ಲಿ ನಿನ್ನೆ (ಜೂ.3) ನಡೆದಿದೆ.ವರುಣ್​ (28) ಕೊಲೆಯಾದ ಯುವಕ. ಶಾಸಕರ ಅಭಿನಂದನಾ ಸಮಾರಂಭ ಹಿನ್ನೆಲೆಯಲ್ಲಿ ಆರ್ಕೆಸ್ಟ್ರಾ ಹಮ್ಮಿಕೊಳ್ಳಲಾಗಿತ್ತು.

    ಈ ವೇಳೆ ಹಾಡು ಬದಲಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಿಡಿಗೇಡಿಯೊಬ್ಬ ವರುಣ್​ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.

    ಕಬಾಬ್ ಮೂರ್ತಿಯಿಂದ ಕೃತ್ಯ

    ಘಟನೆಯ ವಿವರಣೆಗೆ ಬರುವುದಾದರೆ, ತರೀಕೆರೆ ಶಾಸಕ ಜಿ.ಎಚ್​. ಶ್ರೀನಿವಾಸ್​ ಅವರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದರು. ಆರ್ಕೆಸ್ಟ್ರಾ ತಂಡವನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ವೇಳೆ ಹಾಡು ಬದಲಿಸುವ ವಿಚಾರಕ್ಕೆ ಆರೋಪಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ.

    ಹೊಟ್ಟೆ, ಪಕ್ಕೆಲುಬಿಗೆ ಇರಿತ

    ಇತ್ತ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಆಕ್ರೋಶಭರಿತ ಕಬಾಬ್​ ಮೂರ್ತಿ, ವರುಣ್​ನ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಚಾಕು ಇರಿದು ಪರಾರಿಯಾಗಿದ್ದಾನೆ. ರಕ್ತಸ್ರಾವದಿಂದ ಒದ್ದಾಡುತ್ತಿದ್ದ ವರುಣ್​ನನ್ನು ಕೂಡಲೇ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವರುಣ್ ಮೃತಪಟ್ಟಿದ್ದಾನೆ. ಮಂಜು ಹಾಗೂ ಸಂಜು ಎಂಬವರ ಕೈ ಹಾಗೂ ಕಾಲಿಗೂ ಕಬಾಬ್​ ಮೂರ್ತಿ ಚಾಕು ಇರಿದಿದ್ದಾನೆ.

    ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

    Post Views: 314

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.