ಉಡುಪಿ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷವೂ 2 ಸಾವಿರ ಪೊಲೀಸರು ನಿವೃತ್ತರಾಗಿ ಹುದ್ದೆಗಳು ಖಾಲಿ ಬೀಳುತ್ತಿವೆ. ಪಿಎಸ್ ಐ ನೇಮಕ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಲ್ಲಿರುವ ತಡೆಯಾಜ್ಞೆ ತೆರವು ಬಳಿಕ ಹಾಗೂ ಹಗರಣದಲ್ಲಿ ಸಿಲುಕದ 450 ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಸರ್ಕಾರದ ಹಗರಣಗಳ ಸಾಧಕ, ಬಾಧಕವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ತೀರ್ಪು ಬರುವವರೆಗೂ ಕಾಯೋಣ ಎಂದು ಹೇಳಿದ್ದಾರೆ.