Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ: ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ: ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ

    June 15, 2023
    Share

    ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.

    ಈ ಸಂಬಂಧ ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ‘ಫೇಸ್‌ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.

    ಭಾರತೀಯ ಪ್ರಜೆ ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

    ಏನಿದು ಪ್ರಕರಣ?:

    ಮಂಗಳೂರಿನ ಬಿಕರನಕಟ್ಟೆಯ 45 ವರ್ಷದ ಶೈಲೇಶ್ ಕುಮಾರ್ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ ಕುಬೆರ್ ಎಂಬಲ್ಲಿ ಉದ್ಯೋಗಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ. ಶೈಲೇಶ್ 2019ರಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್‌ಆರ್‌ಸಿ) ಬೆಂಬಲಿಸಿ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದರಿಂದ ಅವರಿಗೆ ಅನಾಮಿಕರಿಂದ ಬೆದರಿಕೆ ಬಂದಿತ್ತು. ಹಾಗಾಗಿ, ಅವರು ತಮ್ಮ ಫೇಸ್‌ಬುಕ್ ಖಾತೆಯನ್ನು ರದ್ದುಪಡಿಸಿದ್ದರು.

    ಏತನ್ಮಧ್ಯೆ ಶೈಲೇಶ್ ಕುಮಾರ್ ಹೆಸರಿನಲ್ಲಿ 2020ರ ಫೆಬ್ರುವರಿಯಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಅವರ ಧರ್ಮದ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ತಮ್ಮ ಗಮನಕ್ಕೆ ಬಂದಕೂಡಲೇ ಶೈಲೇಶ್‌ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ತಿಳಿಸಿದ್ದರು.

    ಇದೇ ವೇಳೆ ಸೌದಿ ಪೊಲೀಸರು ಶೈಲೇಶ್‌ ಅವರನ್ನು ಬಂಧಿಸಿದ್ದರು. ಈ ಕುರಿತಂತೆ ಮಂಗಳೂರಿನಲ್ಲಿ ಪತ್ನಿ ಕವಿತಾ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್‌ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಅಂತೆಯೇ, ‘ನಿರಪರಾಧಿಯಾದ ನನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸಿ’ ಎಂದು ಕೋರಿ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದರು.

    ಈ ಮನವಿ ಫಲ ನೀಡದ ಕಾರಣ ಅವರು, ‘ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ’ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಅನುಸಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ಬುಧವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು.

    Post Views: 295

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.