Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪೊಲೀಸರಿಂದ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭ; ಕರ್ನಾಟಕದಲ್ಲಿ ಇದೇ ಮೊದಲು
    ಇತ್ತೀಚಿನ ಸುದ್ದಿ

    ಮಂಗಳೂರು ಪೊಲೀಸರಿಂದ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭ; ಕರ್ನಾಟಕದಲ್ಲಿ ಇದೇ ಮೊದಲು

    June 17, 2023
    Share

    ಮಂಗಳೂರು: ಇತ್ತೀಚೆಗೆ ಗೃಹ ಸಚಿವರು ಮಂಗಳೂರಿಗೆ ಬಂದಾಗ ಆ್ಯಂಟಿ ಕಮ್ಯೂನಲ್ ವಿಂಗ್ ಘೋಷಣೆ ಮಾಡಿದ್ದರು. ಅವರ ಸೂಚನೆಯಂತೆ ಮಂಗಳೂರು ನಗರದಲ್ಲಿ ಆಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗಿದೆ. ಸಿಟಿ ಸ್ಪೆಷಲ್ ಬ್ರಾಂಚ್ ( ಸಿ ಎಸ್ ಬಿ) ಇನ್ಸ್ ಪೆಕ್ಟರ್ ಶರೀಫ್ ಅವರ ನೇತೃತ್ವದಲ್ಲಿ ಈ ತಂಡ ರಚಿಸಲಾಗಿದೆ.

    ಸಿಎಸ್‌ಬಿ ಇನ್ಸ್ ಪೆಕ್ಟರ್ ಅವರು ಸಿಸಿಬಿ ಎಸಿಪಿ ಪಿ ಎ ಹೆಗ್ಡೆ ಇದರ ಮೇಲುಸ್ತುವಾರಿ ನೋಡಿಕೊಳ್ಳಲಿದ್ದು, ಅವರು ನೇರವಾಗಿ ಪೊಲೀಸ್ ಕಮೀಷನರ್ ಅವರಿಗೆ ವರದಿ ಸಲ್ಲಿಸಲಿದ್ದಾರೆ.

    ಆ್ಯಂಟಿ ಕಮ್ಯೂನಲ್ ವಿಂಗ್ ಎಲ್ಲಾ ರೀತಿಯ ಕೋಮು ಪ್ರಕರಣಗಳ ಬಗ್ಗೆ ನಿಗಾವಹಿಸಲಿದೆ. ಕೋಮು ಪ್ರಕರಣದ ಆರೋಪಿಗಳ ಮೇಲೆ ನಿಗಾ ವಹಿಸಲಿದ್ದು, ಅವರ ಕಾರ್ಯಾಚರಣೆ ಬಗ್ಗೆ ಗಮನಕೊಡಲಿದೆ. ಹಿಂದಿನ ಎಲ್ಲಾ ಪ್ರಕರಣಗಳ ಸಂಬಂಧ ನ್ಯಾಯಾಲಯದ ವಿಚಾರಣೆ ಗಳ ಬಗ್ಗೆ ನಿಗಾವಹಿಸಲಿದ್ದು, ಸಂತ್ರಸ್ತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಿದೆ. ಕಳೆದ 10 ವರ್ಷಗಳಿಂದ ನಡೆದ ಸುಮಾರು 200 ಪ್ರಕರಣಗಳ ಬಗ್ಗೆ ಈ ತಂಡ ನಿಗಾವಹಿಸಲಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಂಗಳೂರಿನಲ್ಲಿ ಸಿಟಿ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.

    ನಿಗಾ ಇಡುವ ಕಾರ್ಯವನ್ನೂ ಮಾಡುತ್ತೆ

    ಮಂಗಳೂರು ನಗರದ ವಿಶೇಷ ಘಟಕದ (ಸಿ.ಎಸ್‌.ಬಿ) ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು “ಆ್ಯಂಟಿ ಕಮ್ಯೂನಲ್ ವಿಂಗ್ (Anti Communal Wing)” ನ ಸದಸ್ಯರಾಗಿರುತ್ತಾರೆ, ಅವರುಗಳು ನಗರದಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕೋಮು ಸೌಹಾರ್ದಕ್ಕೆ ದಕ್ಕೆ ಉಂಟು ಮಾಡುವ ಪ್ರಕರಣಗಳ ಕುರಿತು ಕಾಲಕಾಲಕ್ಕೆ ಆರೋಪಿಗಳ ಮೇಲೆ ನಿಗಾ ಇಡುವ ಕ್ರಮಗಳನ್ನು ಕೈಗೊಳ್ಳುವುದು. ನಗರದ ಅಪರಾಧ ವಿಭಾಗದ (ಸಿಸಿಐ) ಸಹಾಯಕ ಪೊಲೀಸ್‌ ಆಯುಕ್ತರು ಈ ತಂಡದ ಉಸ್ತುವಾರಿಯನ್ನು ವಹಿಸಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕೋಮು ಗಲಭೆಗಳು ನಡೆಯದಂತೆ ಹಾಗೂ ಕೋಮು ಸೌಹಾರ್ದಕ್ಕೆ ತೊಂದರೆಯಾಗಬಹುದಾದ ವಿಚಾರಗಳ ಕುರಿತು ಕ್ರಮಗಳನ್ನು ಕೈಗೊಂಡು ಈ ಬಗ್ಗೆ ಮುಂಚಿತವಾಗಿ ಮಾಹಿತಿಯನ್ನು ಪಡೆದುಕೊಂಡು ಸಮಸ್ಯೆ ಬಂದಾಗ, ಕ್ಷಿಪ್ತ ಕಾರ್ಯಾಚರಣೆಯನ್ನು ನಡೆಸಿ ‘ಪರಿಸ್ಥಿತಿಯನ್ನು ನಿರ್ವಹಣೆ ಮಾಡಿ ನಿಭಾಯಿಸುವ ಕ್ರಮಗಳನ್ನು ಕೈಗೊಳ್ಳುವುದು. ಈ ನಿಟ್ಟಿನಲ್ಲಿ ‘ಆ್ಯಂಟಿ ಕಮ್ಯೂನಲ್ ವಿಂಗ್’ ತಂಡವನ್ನು ರಚಿಸಿ ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಕುಲದೀಪ್ ಕುಮಾರ್ ಆರ್. ಜೈನ್ ಆದೇಶಿಸಿದ್ದಾರೆ. ‘ಆ್ಯಂಟಿಕಮ್ಯೂನಲ್ ವಿಂಗ್’ ತಂಡವು ನಗರದಲ್ಲಿ ನಡೆಯಬಹುದಾದ ನೈತಿಕ ಪೊಲೀಸ್ ಗಿರಿ ಸಮಸ್ಯೆಯನ್ನು ನಿಭಾಯಿಸುವುದು, ನಗರದಲ್ಲಿ ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು ಸೇರಿದಂತೆ ನೈತಿಕ ಪೊಲೀಸ್‌ ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋವಧೆ ಮುಂತಾದ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸಿ ಅವರುಗಳ, ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದರ ಬಗ್ಗೆ ಕರ್ತವ್ಯ ನಿರ್ವಹಿಸುವುದು, ಮಾಹಿತಿ ಸಂಗ್ರಹಿಸಿ ನಿಗಾವಹಿಸುವುದು ಮಾಡಬೇಕಾಗಿದೆ‌.

    ದ್ವೇಷ ಭಾಷಣವಾದರೂ ಕೇಸ್

    ಕೋಮು ದ್ವೇಷ ಮೂಡುವಂತಹ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ, ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವುದು, ದನಗಳ್ಳತನ ಪ್ರಕರಣದ ಬಗ್ಗೆ ಈ ತಂಡ ನಿಗಾವಹಿಸಲಿದೆ. ಯಾವುದೇ ಘಟನೆ ನಡೆದಾಗ ಆಯಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ಆ ಬಳಿಕ ಆಯಂಟಿ ಕಮ್ಯೂನಲ್ ವಿಂಗ್ ಕ್ರಮ ಕೈಗೊಳ್ಳಲಿದೆ ಎಂದು ಕಮೀಷನರ್ ತಿಳಿಸಿದ್ದಾರೆ. ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆಯಾದ ಸಮಯದಲ್ಲಿ ಅಶಾಂತಿಯ ವಾತಾವರಣ ಉಂಟಾಗಿರುತ್ತದೆ. ಪರಿಸ್ಥಿತಿಯನ್ನು ನಿರ್ವಹಣಿ ಮಾಡಲು “Anti Communal Wing” ನ್ನು ರಚಿಸುವ ಅವಶ್ಯಕತೆ ಬಗ್ಗೆ ಜೂನ್ 5 ರಂದು ಕರ್ನಾಟಕ ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಕಮೀಷನರ್ ಹೇಳಿದ್ದಾರೆ.

    Post Views: 206

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.