Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಅನ್ನ ಭಾಗ್ಯ ಯೋಜನೆ : ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ
    Uncategorized

    ಅನ್ನ ಭಾಗ್ಯ ಯೋಜನೆ : ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

    June 28, 2023
    Share

    ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೆ ಹೆಚ್​ ಮುನಿಯಪ್ಪ , ಪಡಿತರದಾರರಿಗೆ ಅಕ್ಕಿಯ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಜನರಿಗೆ ಅಕ್ಕಿಯನ್ನು ನೀಡೋಕೆ ಅಕ್ಕಿಯ ಕೊರತೆಯಿದೆ . ಹೀಗಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಮನೆಯ ಪ್ರತಿಯೊಬ್ಬ ಸದಸ್ಯನಿಗೆ ರಾಜ್ಯ ಸರ್ಕಾರವು 170 ರೂಪಾಯಿಗಳನ್ನು ನೀಡಲಿದೆ. ಅನ್ನಭಾಗ್ಯ ಯೋಜನೆಯ ಬದಲಾಗಿ ಈ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಕಾರ್ಡ್​ ಹೋಲ್ಡರ್​ ಖಾತೆಗೆ ನೇರವಾಗಿ ಈ ಹಣ ಸಂದಾಯವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಬಿಪಿಎಲ್​ ಕಾರ್ಡ್ ಹೊಂದಿರುವವರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ. ಕಾರ್ಡ್​ನ ಅನುಸಾರ ಯಾರು ಮನೆಯ ಯಜಮಾನ ಎನಿಸಿರುತ್ತಾರೋ ಅವರ ಖಾತೆಗೆ ಇತರೆ ಕುಟುಂಬಸ್ಥರಿಗೆ ನೀಡಬೇಕಾದ ಹಣ ಕೂಡ ಹೋಗಲಿದೆ. ಶೀಘ್ರದಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಮುನಿಯಪ್ಪ ಹೇಳಿದ್ದಾರೆ.

    Post Views: 286

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.