Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಯುವಕನನ್ನು ಹೊಡೆದು ಸಾಯಿಸಿದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
    ಇತ್ತೀಚಿನ ಸುದ್ದಿ

    ಮಂಗಳೂರು : ಯುವಕನನ್ನು ಹೊಡೆದು ಸಾಯಿಸಿದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

    July 1, 2023
    Share

    ಮಂಗಳೂರು: ಯುವಕನನ್ನು ಹೊಡೆದು ಸಾಯಿಸಿದ ಅಪರಾಧಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಂಗಳೂರಿನ ಬಡಗ ಎಡಪದವು ನಿವಾಸಿಗಳಾದ ರಮೇಶ್ ಶೆಟ್ಟಿಗಾರ್(41) ಹಾಗೂ ನಿತ್ಯಾನಂದ (41) ಶಿಕ್ಷೆಗೊಳಗಾದ ಅಪರಾಧಿಗಳು. ನ್ಯಾಯಾಧೀಶ ಕಾಂತರಾಜು ಎಸ್.ವಿ.ಯವರು ಜೀವಾವಧಿ ಶಿಕ್ಷೆ ವಿಧಿಸಿದ ತೀರ್ಪು ನೀಡಿದ್ದಾರೆ.

    ಹಣದ ವ್ಯವಹಾರ ಮತ್ತು ರಮೇಶ ಶೆಟ್ಟಿಗಾರ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾನೆಂಬ ದ್ವೇಷದಿಂದ ಆರೋಪಿಗಳು 2019ರ ಮೇ 17ರ ರಾತ್ರಿ 11.50ಕ್ಕೆ ಬಡಗ ಎಡಪದವು ಗ್ರಾಮದ ದೂಮಚಡವು ದಡ್ಡಿ ಕ್ರಾಸ್ ಎಂಬಲ್ಲಿ ಬಡಗ ಎಡಪದವು ನಿವಾಸಿ ನವೀನ (28)‌ ಎಂಬವರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು.ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು.

    ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಐಪಿಸಿ ಕಲಂ 302ರಡಿ ಕಠಿಣ ಜೀವಾವಧಿ ಶಿಕ್ಷೆ, 2 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಕಠಿಣ ಜೀವಾವಧಿ ಶಿಕ್ಷೆ, ಕಲಂ 201ರಡಿ 7 ವರ್ಷಗಳ ಕಠಿಣ ಸಜೆ, 1 ಲಕ್ಷ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

    ಅಲ್ಲದೆ ಕೊಲೆಯಾದ ನವೀನ್ ತಾಯಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ ನಾಯಕ್ ಮತ್ತು ಬಿ.ಶೇಖರ ಶೆಟ್ಟಿ ವಾದಿಸಿದ್ದರು.

    Post Views: 377

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.