Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಣ: ಗುಡ್ಡ ಕುಸಿತ ಭೀತಿ ನೂಚಿಲದ 8 ಕುಟುಂಬಗಳ ಸ್ಥಳಾಂತರ
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಣ: ಗುಡ್ಡ ಕುಸಿತ ಭೀತಿ ನೂಚಿಲದ 8 ಕುಟುಂಬಗಳ ಸ್ಥಳಾಂತರ

    July 11, 2023
    Share

    ಸುಬ್ರಹ್ಮಣ್ಣ: ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಧಳಾಂತರಿಸಲಾಗಿದೆ. ಗೀತಾ ಸತೀಶ್ ನೂಚಿಲ, ಪದ್ದಯ್ಯ ನೂಚಿಲ, ದುಗ್ಗಣ್ಣ ನೂಚಿಲ, ದಿನೇಶ್‌ ನೂಚಿಲ, ಶೋಭಾ ಭಾಸ್ಕರ ನೂಚಿಲ, ದೇವಕಿ ಬಾಲಕೃಷ್ಣ, ಶೋಭಾ ಪ್ರಮೋದ್ ಕುಮಾರ್ ಮತ್ತು ಬಿ.ಎನ್. ರಾಧಾಕೃಷ್ಣ ಅವರ ಮನೆಗಳು ಬೆಟ್ಟದ ತಪ್ಪಲ್ಲಿನಲ್ಲಿವೆ. ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ಮನೆಗಳಿಂದ ತೆರವುಗೊಳಿಸಿ ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ತಪ್ಪಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳ ಪರಿಶೀಲಿಸಿ ತಾಲೂಕು ಆಡಳಿತಕ್ಕೆ ಅಪಾಯದ ಕುರಿತಂತೆ ಮಾಹಿತಿ ನೀಡಿತ್ತು. ಬೃಹತ್ ಬೆಟ್ಟ ಇದಾಗಿದ್ದು, ಇದರ ಬುಡದಲ್ಲೇ ಈ ಮನೆಗಳಿವೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಈ ಕೈಗೊಳ್ಳಲಾಗಿದೆ. ಕಳೆದ ಮಳೆಗಾಲದಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಮೀಪದ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಹಿಂಬದಿಯ ಬೆಟ್ಟ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

    Post Views: 173

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.