ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಗದಗ, ಹಾಸನ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.