Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಪುರಸಭೆ ವಾಹನ ಆಟೋಗೆ ಢಿಕ್ಕಿ- ಮೂವರಿಗೆ ಗಂಭೀರ ಗಾಯ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪುರಸಭೆ ವಾಹನ ಆಟೋಗೆ ಢಿಕ್ಕಿ- ಮೂವರಿಗೆ ಗಂಭೀರ ಗಾಯ..!

    July 25, 2023
    Share

    ಬಂಟ್ವಾಳ: ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಿಸುವ ಘನ ವಾಹನವು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯ ರಸ್ತೆಯಲ್ಲಿ ನಡೆದಿದೆ.

    ಬಂಟ್ವಾಳ ಪುರಸಭೆಯಿಂದ ಬಂಟ್ವಾಳ ಮುಖ್ಯ ರಸ್ತೆಗೆ ಹೊರಟ ಪುರಸಭೆಯ ತ್ಯಾಜ್ಯ ಸಾಗಾಟ ಘನ ವಾಹನವು ಬಿ ಸಿ ರೋಡ್ ನಿಂದ ಬಂಟ್ವಾಳ ಕಡೆಗೆ ಹೋಗುತಿದ್ದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ.

    ಈ ಸಂದರ್ಭದಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರಿಗೆ ಕಣ್ಣು, ಮುಖ, ಎದೆಗೆ ಗಂಭೀರ ಗಾಯಗಳಾಗಿವೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಪುರಸಭೆಯ ವಾಹನವನ್ನು ಪರಿಶೀಲಿಸಿದಾಗ ಈ ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಅವಧಿ ಮುಗಿದು 2 ವರ್ಷ ಕಳೆದಿದ್ದು, ನವೀಕರಣ ಆಗದಿರುವುದು ಕಂಡು ಬಂದಿದೆ.

    ಸಾರಿಗೆ ಇಲಾಖೆಯ ನಿಯಾಮಾಳಿ ಪ್ರಕಾರ ಎಫ್‌.ಸಿ. ಮಾಡದಿರುವ ವಾಹನ ಬಳಕೆಗೆ ಯೋಗ್ಯವಲ್ಲ.

    ಅದು ಗುಜರಿ ವಾಹನಕ್ಕೆ ಸಮಾನವಾಗಿದೆ. ಎಫ್‌.ಸಿ. ಆಗದ ಗುಜರಿ ವಾಹನವನ್ನು ರಸ್ತೆಗೆ ಇಳಿಸಿದರೆ ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ವಿಮಾ ಪರಿಹಾರಕ್ಕೆ ಪರದಾಡುವ ಸಂಕಷ್ಟ ಎದುರಾಗುತ್ತದೆ.

    ಬಂಟ್ವಾಳದ ಈ ಪ್ರಕರಣದಲ್ಲಿ ಪುರಸಭಾ ಮುಖ್ಯಸ್ಥರ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ಕರ್ತವ್ಯ ಲೋಪ ಆಗಿದೆ ಎಂದು ಆರೋಪಿಸಲಾಗಿದೆ.

    ಈ ಮಧ್ಯೆ ಪೊಲೀಸರಿಗೆ ಒತ್ತಡ ತಂದು ಕೇಸು ದಾಖಲಿಸದಿರಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಪ್ರತಿಭಟಿಸಿದ ಪರಿಣಾಮ ಕೊನೆಗೂ ಎಫ್‌. ಐ. ಆರ್‌. ದಾಖಲಾಗಿದೆ ಎಂದು ತಿಳಿದು ಬಂದಿದೆ.

    ಪುರಸಭಾ ಮುಖ್ಯಾಧಿಕಾರಿಯ ಬೇಜವಾಬ್ದಾರಿ ತನಕ್ಕೆ ಗಾಯಳುಗಳ ಸಂಬಂಧಿಕರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಕೂಡಲೇ ಸಾರಿಗೆ ಅಧಿಕಾರಿಗಳು ಪೋಲಿಸರ ವಶದಲ್ಲಿರುವ ವಾಹನದ ಎಫ್‌.ಸಿ. ದಾಖಲೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಜರಗಿಸ ಬೇಕೆಂದು ಆಗ್ರಹಿಸಿದ್ದಾರೆ.

    ಈ ಅಪಘಾತದ ಬಗ್ಗೆ ಪೋಲಿಸರು ಸ್ಥಳಕ್ಕೆ ಆಗಮಿಸಿ  ಪ್ರಕರಣ ದಾಖಲಿಸಿದ್ದಾರೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.