Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ

    July 27, 2023
    Share

    ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ.

    ಕುಳಾಯಿಯ ಪೃಥ್ವಿರಾಜ್‌ (33) ಶಿಕ್ಷೆಗೊಳಗಾದವ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಪರಾಧಿ ಪೃಥ್ವಿರಾಜ್‌ ವಿದ್ಯಾರ್ಥಿಯನ್ನು ತನ್ನ ಮನೆಗೆ ಕರೆಯಿಸಿ ನಿರಂತರವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಯಾರಿಗಾದರೂ ಹೇಳಿದರೆ ಬಿಡುವುದಿಲ್ಲ, ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ. ಹಾಜರಾತಿ ಕಡಿತ ಮಾಡುತ್ತೇನೆ ಎಂದು ಹೆದರಿಸಿದ್ದ. ಬಾಲಕನ ಜನನಾಂಗದಲ್ಲಿ ಹುಣ್ಣಾಗಿ ಗಾಯವಾಗಿ ವೈದ್ಯರಲ್ಲಿ ತಪಾಸಣೆ ನಡೆಸಿ ಚಿಕಿತ್ಸೆ ಪಡೆಯುವ ವೇಳೆ ಬಾಲಕ ತನ್ನ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಸುರತ್ಕಲ್‌ ಇನ್‌ಸ್ಪೆಕ್ಟರ್‌ ಆಗಿದ್ದ ಚೆಲುವರಾಜ್‌ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿಯ ಅಪರಾಧ ದೃಢಪಟ್ಟಿರುವುದರಿಂದ ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ತ ಬಾಲಕನಿಗೆ ರಾಜ್ಯ ಸರಕಾರ 1 ಲ.ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಅವರು ವಾದಿಸಿದ್ದರು

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.