Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

    August 4, 2023
    Share

    ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು.

    ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆ.3ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‍ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು ರಚಿಸಿ, ಸದಸ್ಯರನ್ನು ನೇಮಕ ಮಾಡಲಾಗಿದೆ ಅವರುಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು, ಅದೇ ರೀತಿ ಜಿಲ್ಲೆಯ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನೆ ಕುರಿತಂತೆ ಉತ್ತಮ ಸ್ಕ್ರೀಪ್ಟ್ ರಚಿಸಿ ಒಂದು ನಿಮಿಷದೊಳಗೆ ರೀಲ್ಸ್, ಕಿರು ವಿಡಿಯೋಗಳನ್ನು ವಿದ್ಯಾರ್ಥಿಗಳೇ ನಿರ್ಮಿಸಿಕೊಡುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿ ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಕ್ರಮವಹಿಸಬೇಕು ಹಾಗೂ ತಯಾರಾದ ಅತ್ಯುತ್ತಮ ರೀಲ್ಸ್ ಹಾಗೂ ಕಿರು ಚಿತ್ರಗಳಿಗೆ ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಬಹುಮಾನ ಕೊಡಿಸಲಾಗುವುದು ಎಂದವರು ಹೇಳಿದರು.ಜಿಲ್ಲೆಯಲ್ಲಿರುವ ಡ್ರಗ್ಸ್ ವ್ಯಸನಿಗಳಿಗೆ ಕೌನ್ಸಲಿಂಗ್ ಮಾಡಲು ಜಿಲ್ಲಾ ಮಟ್ಟದಲ್ಲಿ ಗುರುತಿಸಲಾದ ಒಬ್ಬರು ಕೌನ್ಸಿಲರ್ ಅನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ಸೂಚನೆ ನೀಡಿದ ಅವರು, ಜಿಲ್ಲೆಯ ಡ್ರಗ್ ಸೆಲ್‍ನಡಿ ಅವರು ಕಾರ್ಯನಿರ್ವಹಿಸಬೇಕು, ಜಿಲ್ಲೆಯಲ್ಲಿ ಡ್ರಗ್ಸ್ ಸೇವನೆ ಪ್ರಕರಣಗಳು ವರದಿಯಾದಾಗ ಸಂಬಂಧಿಸಿದವರು ಅವರ ಬಳಿ ಕೌನ್ಸೆಲಿಂಗ್‍ಗೆ ಕಳುಹಿಸಿಕೊಡಬೇಕು, ಮುಖ್ಯವಾಗಿ ಎಲ್ಲಾ ಖಾಸಗಿ ಕಾಲೇಜುಗಳಲ್ಲಿಯೂ ಕೌನ್ಸಿಲರ್ ಒಬ್ಬರ ನೇಮಕವಾಗಬೇಕು ಈ ಸಭೆ ನಡೆಸಿ ಕಡ್ಡಾಯವಾಗಿ ಎಲ್ಲಾ ಕಾಲೇಜುಗಳಲ್ಲಿಯೂ ಕೌನ್ಸೆಲರ್ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡುವಂತೆ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ ಜಿಲ್ಲೆಯಲ್ಲಿರುವ ಡ್ರಗ್ ಕೌನ್ಸಿಲಿಂಗ್ ಸೆಂಟರ್‍ಗಳ ನಂಬರ್ ಗಳನ್ನು ಪಟ್ಟಿ ಕೊಟ್ಟಲ್ಲಿ ಡ್ರಗ್ಸ್ ವ್ಯಸನಿಗಳು ಕಂಡುಬಂದ ಕೂಡಲೇ ಅವರನ್ನು ಕೌನ್ಸೆಲಿಂಗ್‍ಗೆ ಕಳುಹಿಸಲು ಅನುಕೂಲವಾಗಲಿದೆ ಎಂದರು.ಬೆಳ್ತಂಗಡಿಯ ನೆರಿಯಾದಲ್ಲಿ ಗಾಂಜಾ ಬೆಳೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರು ಈ ಪರಿಶೀಲಿಸಿ ಕೂಡಲೇ ವರದಿ ನೀಡಬೇಕು ಹಾಗೂ ಈ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಬಗ್ಗೆ ಘೋಷಿಸುವಂತೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಪುತ್ತೂರು ಡಿವೈಎಸ್‍ಪಿ ಡಾ. ಗಾನಾ ಪಿ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

    Post Views: 263

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.