Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿನ್ನಾರಿ ಮುತ್ತನ ‘ಚಿನ್ನ’ ಇನ್ನೂ ನೆನಪು ಮಾತ್ರ, ಸ್ಪಂದನ ಪಂಚಭೂತಗಳಲ್ಲಿ ಲೀನಾ
    ಇತ್ತೀಚಿನ ಸುದ್ದಿ

    ಚಿನ್ನಾರಿ ಮುತ್ತನ ‘ಚಿನ್ನ’ ಇನ್ನೂ ನೆನಪು ಮಾತ್ರ, ಸ್ಪಂದನ ಪಂಚಭೂತಗಳಲ್ಲಿ ಲೀನಾ

    August 9, 2023
    Share

    ಬೆಂಗಳೂರು: ಇತ್ತೀಚೆಗೆ ಥಾಯ್ಲೆಂಡ್‌ ನಲ್ಲಿ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಬುಧವಾರ (ಆಗಸ್ಟ್‌ 09) ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತಿ, ನಟ ವಿಜಯ್‌ ರಾಘವೇಂದ್ರ, ಮೈದುನ ಶ್ರೀಮುರಳಿ, ಸ್ಪಂದನಾ ಕುಟುಂಬ ಸದಸ್ಯರು ಹಾಜರಿದ್ದರು.

    ಮಾಜಿ ಪೊಲೀಸ್‌ ಅಧಿಕಾರಿ ಬಿಕೆ ಶಿವರಾಂ ಅವರ ಮಲ್ಲೇಶ್ವರದ ನಿವಾಸದಿಂದ ಹರಿಶ್ಚಂದ್ರ ಘಾಟ್‌ ವರೆಗೆ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ಯಾತ್ರೆ ಸಾಗಿತು. ಹರಿಶ್ಚಂದ್ರ ಘಾಟ್‌ ನಲ್ಲಿ ಈಡಿಗ ಸಂಪ್ರದಾಯದಂತೆ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಸ್ಪಂದನಾ ತಂದೆ ಬಿಕೆ ಶಿವರಾಮ್‌ ಅವರ ಮಲ್ಲೇಶ್ವರಂ ನಿವಾಸದಲ್ಲಿ ಬುಧವಾರ ಬೆಳಗ್ಗೆಯಿಂದಲೇ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2-30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

    ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಅಂತಿಮವಾಗಿ ದರ್ಶನ ಪಡೆದರು. ಅಂತಿಮ ವಿಧಿ ವಿಧಾನಗಳನ್ನು ಪತಿ ಹಾಗು ನಟ ವಿಜಯರಾಘವೇಂದ್ರ ಹಾಗೂ ಪುತ್ರ ಶೌರ್ಯ ನೆರವೇರಿಸಿ ಅವರ ಮೃತ ದೇಹಕ್ಕೆ ಅಗ್ನಿಸ್ಪರ್ಶ ನೀಡಿದರು.

    ತಂದೆ ಶಿವರಾಂ, ಚಿಕ್ಕಪ್ಪ ಬಿಕೆ ಹರಿಪ್ರಸಾದ್, ಮಾವ ಚಿನ್ನೇಗೌಡರು, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ಮೈದುನ ಶ್ರೀ ಮುರಳಿ, ಸೇರಿದಂತೆ, ಕನ್ನಡ ಚಿತ್ರರಂಗದ ಎಲ್ಲಾ ಹಿರಿಯ-ಕಿರಿಯ ಕಲಾವಿದರು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ದುಃಖದ ಮಡುವಿನಲ್ಲಿ ಇದಿದ್ದು ಕಂಡು ಬಂದಿತು.

    Post Views: 176

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.