ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಮೂಲತಃ ಉಡುಪಿ ಜಿಲ್ಲೆ ನಂದಿಕೂರಿನ ಪ್ರಸ್ತುತ ಕುಳಾಯಿಯಲ್ಲಿ ವಾಸ ಮಾಡುತ್ತಿರುವ ಮುಸ್ತಾಫಾ ಎಂಬಾತನನ್ನು ಪಲಿಮಾರಿನಿಂದ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.