ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟರ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂಸೇವಕ ‘ಪ್ರಜಾಪ್ರತಿನಿಧಿಗಳು’ ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡುತ್ತಾರೆ.