ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧಿಸಲಾಗಿದೆ. ಅವರ ಬಂಧನದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಏನು ಹೇಳಿದ್ರು ಅಂತ ಮುಂದೆ ಓದಿ.
ಇಂದು ಚೈತ್ರಾ ಕುಂದಾಪುರ ಅವರನ್ನ ಸಿಸಿಬಿ ಪೊಲೀಸರ ಬಂಧನದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ.
3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದರು.
ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಹಾಲಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ ಎಂದರು.
ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದು ತಿಳಿಸಿದರು.