ನವದೆಹಲಿ: ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ.
ಸೆಪ್ಟೆಂಬರ್ 19 ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾತ್ರಿ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಅನುಮೋದನೆ ನೀಡಲಾಗಿದೆ. ಈ ವಿಷಯವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, ಮಹಿಳಾ ಮೀಸಲಾತಿಯ ಬೇಡಿಕೆಯನ್ನ ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು, ಇದು ಸಂಪುಟದ ಅನುಮೋದನೆಯಿಂದ ಸಾಬೀತಾಗಿದೆ. ನರೇಂದ್ರ ಮೋದಿ ಜೀ ಮತ್ತು ಮೋದಿ ಸರ್ಕಾರಕ್ಕೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.