ಪುತ್ತೂರು : ಕಾರೊಂದು ಡಿಕ್ಕಿಹೊಡೆದ ಪರಿಣಾಮ ಶಾಲಾ ಬಾಲಕನೊಬ್ಬ ಸಾವನಪ್ಪಿದ ಘಟನೆ ಕೆಯ್ಯೂರು ಗ್ರಾಮದ ಮಾಡಾವು ಶಾಲೆಯ ಸಮೀಪ ಪುತ್ತೂರು-ಬೆಳ್ಳಾರೆ ರಸ್ತೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಮಾಡಾವು ಸಂತೋಷನಗರ ಸಮೀಪದ ಪಾತುಂಜ ನಿವಾಸಿ ಹಾರೀಶ್ ದಾರಿಮಿ ಮತ್ತು ಅಭಿದಾ ದಂಪತಿಯ ಪುತ್ರ ಮುಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ.
ಮುಹಮ್ಮದ್ ಆದಿಲ್ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಯುಕೆಜಿ ಮತ್ತು ಮಾಡಾವು ನುಸ್ರತುಲ್ ಇಸ್ಲಾಂ ಮದ್ರಸದಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ. ಶನಿವಾರ ಮಧ್ಯಾಹ್ನ ಕೆಪಿಎಸ್ ಶಾಲೆಯಿಂದ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮುಹಮ್ಮದ್ ಆದಿಲ್ ರಸ್ತೆ ದಾಟುತ್ತಿದ್ದ ವೇಳೆ ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಎಕೊ ಕಾರೊಂದು ಮಾಡಾವು ಶಾಲೆಯ ಸಮೀಪ ಡಿಕ್ಕಿ ಹೊಡೆದಿತ್ತು ಎಂದು ಗೊತ್ತಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಲಾಗಿತ್ತು.