ಸುಳ್ಯ: ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿನ ಚಕಮಕಿ ನಡೆದು ಅಣ್ಣ ತಮ್ಮನಿಗೆ ಕತ್ತಿಯಿಂದ ಕಡಿದು ಗಾಯಗೊಳಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಗ್ರಾಮದ ಮುಳ್ಯ ಅಟ್ಟೂರಿನ ಕುಂಚಡ್ಕ ಎಂಬಲ್ಲಿ ರವಿವಾರ ನಡೆದಿದೆ. ಗಾಯಗೊಂಡವರನ್ನು ರವಿಚಂದ್ರ ಎಂದು ಗುರುತಿಸಲಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಆಸ್ತಿ ವಿಚಾರವಾಗಿ ಸಹೋದರರೊಳಗೆ ಮಾತಿಗೆ ಮಾತು ಬೆಳೆಯಿತು. ಈ ವೇಳೆ ಅಣ್ಣ ಲವ ಕುಮಾರ್ ಎಂಬವರು ತಮ್ಮ ರವಿಚಂದ್ರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.