Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

    October 27, 2024
    Share

    ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್ ವಿನಯ ಕುಮಾರ ಎಂದು ಪರಿಚಯಿಸಿಕೊಂಡಿದ್ದ ಕಿರುಕುಳದ ಬಗ್ಗೆ ನಿಮ್ಮ ಮೇಲೆ ದೂರು ದಾಖಲಾಗಿದೆ. ಠಾಣೆಗೆ ಬರಬೇಕು ಎಂದು ತಿಳಿಸಿದ. ಬಳಿಕ ಆಕಾಶ ಕುಲ್ಲಹಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ. ನರೇಶ್ ಗೋಯೆಲ್ ಎಂಬವರ ಮನೆಯನ್ನು ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು 2 ಕೋ.ರೂ.ಗಳನ್ನು ನಿಮ್ಮಮುಂಬೈಯ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆ ಬಗ್ಗೆ ಮನಿ ಲಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ಹಾಗಾಗಿ ನಿಮ್ಮನ್ನು ಬಂಧಿಸಲಾಗುವುದು ಎಂದು ತಿಳಿಸಿದ.

    ನಿಮ್ಮ ದಾಖಲಾತಿಗಳನ್ನು ಸುಪ್ರೀಕೋರ್ಟ್‌ಗೆ ಸಲ್ಲಿಸಬೇಕು. ನಿಮಗೆ ಬರಲು ಅಸಾಧ್ಯವಾದರೆ ನಾನೇ ಆನ್‌ಲೈನ್ ಮೂಲಕ ತನಿಖೆ ಮಾಡುತ್ತೇನೆ ಎಂದಿದ್ದು, ಮರುದಿನ ಮತ್ತೆ ಕರೆ ಮಾಡಿದ ಆಕಾಶ ಕುಲ್ಲಹಾರಿ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ. ತಾನು ಎಲ್ಲ ವಿವರಗಳನ್ನು ನೀಡಿದೆ. ಆಗ ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲ ಹಣವನ್ನು ಆರ್‌ಬಿಐಗೆ ವರ್ಗಾಯಿಸಬೇಕಾಗಿದೆ. ಆದರೆ ಆ ರೀತಿ ವರ್ಗಾಯಿಸಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್‌ಪ್ರೈಸಸ್‌ನ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆ ಸಂಖ್ಯೆ ನೀಡಿದ್ದ. ತಾನು ಅ.19ರಂದು 50 ಲ.ರೂ. ಹಣವನ್ನು ಆಕಾಶ ಕುಲ್ಲಹಾರಿ ನೀಡಿದ ಖಾತೆಗೆ ವರ್ಗಾವಣೆ ಮಾಡಿದೆ. ಹಣ ವರ್ಗಾವಣೆಯ ರಶೀದಿಯನ್ನು ಆಕಾಶ ಕಲ್ಲಹಾರಿಗೆ ವಾಟ್ಸ್ಆ್ಯಪ್ ಮೂಲಕ ಕಳುಹಿಸಿದೆ. ನಿಮ್ಮ ಹಣವನ್ನು ಮೂರು ದಿನಗಳ ನಂತರ ಮರುಪಾವತಿ ಮಾಡುತ್ತೇನೆಂದು ತಿಳಿಸಿದ್ದ. ಅ.23ರಂದು ಆಕಾಶ ಕುಲ್ಲಹಾರಿಗೆ ಕರೆ ಮಾಡಿ ಹಣದ ಬಗ್ಗೆ ವಿಚಾರಿಸಿದಾಗ ಹಣವನ್ನು ನಿಮ್ಮ ಖಾತೆಗೆ ವರ್ಗಾವಣೆ ಮಾಡುತ್ತೇನೆ. ಆದರೆ ನೀವು ಬೇರೊಂದು ಬ್ಯಾಂಕ್ ಖಾತೆಗೆ ಕೆಲವು ಮೊತ್ತವನ್ನು ವರ್ಗಾವಣೆ ಮಾಡಬೇಕೆಂದು ತಿಳಿಸಿದ. ಆ ಸಂದರ್ಭ ತನಗೆ ಸಂದೇಹ ಉಂಟಾಗಿದೆ ಎಂದು ವಂಚನೆಗೆ ಒಳಗಾದ ವ್ಯಕ್ತಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 134

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.