Facebook Twitter Instagram
    Thursday, July 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026
    Share

    ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಗಳನ್ನು ಮಹಮ್ಮದ್ ರಿಯಾಜ್ (26), ಕೋಟೆಕಾರ್ ನಿವಾಸಿ, ಮಹಮ್ಮದ್ ಅಫ್ರಾಜ್ (23), ಶಿರ್ವ ನಿವಾಸಿ ಹಾಗೂ ಆಶಿಲ್ (21), ಅಂಬಾಗಿಲು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು (KA-14-MB-8452) ವಶಪಡಿಸಿಕೊಳ್ಳಲಾಗಿದೆ.

    ಜೂನ್ 27ರಂದು ರಾತ್ರಿ 9.10ರ ಸುಮಾರಿಗೆ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್ ಫ್ಯೂಯೆಲ್ ಬಂಕ್‌ಗೆ KA-14-MB-8452 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರಿನಲ್ಲಿ ಮೂವರು ಬಂದಿದ್ದರು. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸಿಬ್ಬಂದಿ ಶಶಾಂಕ್ ಅವರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸೂಚಿಸಿದ್ದು, ₹4,711.09 ಮೌಲ್ಯದ ಡೀಸೆಲ್ ತುಂಬಿಸಲಾಗಿದೆ.

    ಬಳಿಕ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಬಿಲ್ ನೀಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸಿಬ್ಬಂದಿ ಬಿಲ್ ತೆಗೆಯುವಷ್ಟರಲ್ಲಿ ಹಣ ಪಾವತಿಸದೆ ಕಾರನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 56/2026ರಡಿ ಬಿಎನ್‌ಎಸ್ 2023ರ ಕಲಂ 316(2) ಮತ್ತು 318(4) ಅನ್ವಯ ಪ್ರಕರಣ ದಾಖಲಾಗಿತ್ತು.

    ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ, ದರಿಯಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದೆ.

    ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಇದೇ ರೀತಿಯ ವಂಚನೆ ಕೃತ್ಯಗಳನ್ನು ಬೇರೆಡೆಗಳಲ್ಲಿ ಎಸಗಿರುವ ಕುರಿತು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

    Post Views: 1

    Related Posts

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026

    ಉಡುಪಿ: ಖಾಸಗಿ ಬಸ್‌ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು- ವೀಡಿಯೋ ವೈರಲ್

    July 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.