Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌
    ಇತ್ತೀಚಿನ ಸುದ್ದಿ

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026
    Share

    ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

    ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್ ಆಫೀಸಿನ ಸೀಲ್ ಪತ್ತೆಯಾಗಿದ್ದು, ಮೂಲ ಆಧಾರ್ ಕಾರ್ಡ್ ಪ್ರತಿಗಳು ಸಾರ್ವಜನಿಕರ ಮನೆಗೆ ತಲುಪದೆ, ನೇತ್ರಾವತಿ ನದಿ ಹೇಗೆ ಬಂತು ಎಂಬ ಪ್ರಶ್ನೆ ಎದುರಾಗಿದೆ.

    ಆಧಾರ್‌ ಕಾರ್ಡ್‌ಗಳು ಪ್ರಸ್ತುತ ಗ್ರಾಮ ಪಂಚಾಯತ್ ಸ್ವಾಧೀನದಲ್ಲಿದೆ. ಸಂಬಂಧಪಟ್ಟ ಅಂಚೆ ಇಲಾಖೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಪತ್ರ ಬರೆಯುವಂತೆ ಪಾಣೆಮಂಗಳೂರು ಕಂದಾಯ ನಿರೀಕ್ಷಕರು ತಹಸೀಲ್ದಾರ್‌ಗೆ ವರದಿ ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆಧಾರ್ ಕಾರ್ಡ್‌ಗಳಲ್ಲಿ ಫರಂಗಿಪೇಟೆಯ ಪೋಸ್ಟ್ ಆಫೀಸಿನ ಸೀಲ್ ಪತ್ತೆಯಾಗಿದೆ. ಆಧಾರ್ ಕಾರ್ಡ್‌ಗಳನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಅಂಚೆ ಇಲಾಖೆಯವರದ್ದಾಗಿರುತ್ತದೆ. ಅಂಚೆ ಇಲಾಖೆಯ ಸಿಬ್ಬಂದಿ ಸಾರ್ವಜನಿಕ ಸೇವಕರಾಗಿದ್ದು, ಈ ದಾಖಲೆಗಳನ್ನು ಸುರಕ್ಷಿತವಾಗಿ ಸಾರ್ವಜನಿಕರಿಗೆ ವಿತರಿಸುವ ಕಾನೂನಾತ್ಮಾಕ ಜವಾಬ್ದಾರಿಯನ್ನು ಹೊಂದಿದ್ದರೂ ಮತ್ತು ವೈಯಕ್ತಿಕ ಮಾಹಿತಿ ಸೋರಿಕೆ ಆಗುವ ಸಂಭವ ಇದ್ದರೂ ಈ ದಾಖಲೆಗಳನ್ನು ಸಾರ್ವಜನಿಕ ಸ್ಥಳದಲ್ಲಿ ಬೇಜಾವ್ದಾರಿಯಿಂದ ಬಿಸಾಡಿರುವುದು ಮೇಲ್ನೋಟಕ್ಕೆ ನಂಬಿಕೆದ್ರೋಹ ಎಸಗಿದಂತಾಗಿದೆ. ನಾಗರಿಕರ ಆಧಾರ್‍ ಕಾರ್ಡ್‍ನ್ನು ಸುರಕ್ಷಿತವಾಗಿ ನಾಗರಿಕರಿಗೆ ತಲುಪಿಸುವ ಜವಾಬ್ದಾರಿ ಹೊಂದಿದ ಅಂಚೆ ಇಲಾಖೆಯ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

    Post Views: 148

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.