ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹ*ಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಪೊಲೀಸ್ ಪ್ರಕಟಣೆ ತಿಳಿಸಿದೆ.




