Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ: ತಾಂತ್ರಿಕ ಸಾಕ್ಷ್ಯ ಆಧರಿಸಿ ತನಿಖೆ ನಡೆಯುತ್ತಿದೆ- ಎಸ್ಪಿ
    ಇತ್ತೀಚಿನ ಸುದ್ದಿ

    ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ: ತಾಂತ್ರಿಕ ಸಾಕ್ಷ್ಯ ಆಧರಿಸಿ ತನಿಖೆ ನಡೆಯುತ್ತಿದೆ- ಎಸ್ಪಿ

    October 19, 2025
    Share

    ಕಾರ್ಕಳದ ಯುವಕ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

    ಹನಿ ಟ್ರ್ಯಾಪ್ ಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹರಿರಾಮ್ ಶಂಕರ್, ಡೆತ್ ನೋಟ್ ನಲ್ಲಿ ಉಲ್ಲೇಖಸಿರುವ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ.

    ಆರಂಭಿಕವಾಗಿ ಇದು ಪ್ರೀತಿ ವೈಫಲ್ಯದ ಪ್ರಕರಣವೆಂದು ಕಂಡುಬಂದರೂ, ಸೂಸೈಡ್‌ ನೋಟ್‌ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆಯ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ.

    ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ತನಿಖೆ ಪಾರದರ್ಶಕವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಿದ್ದಾರೆ.

    ನಾಲ್ವರ ಪೈಕಿ ಈಗಾಗಲೇ ಮೂವರನ್ನು ಗುರುತಿಸಲಾಗಿದೆ. ಅವರ ಫೋನ್ ವಶಪಡಿಸಿಕೊಂಡು ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ತಿಳಿಸಿದರು.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.