Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಭೀಕರ ಅಪಘಾತ; ಪೊಲೀಸ್ ಸಿಬ್ಬಂದಿ ಸೇರಿ ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಭೀಕರ ಅಪಘಾತ; ಪೊಲೀಸ್ ಸಿಬ್ಬಂದಿ ಸೇರಿ ಹಲವರಿಗೆ ಗಾಯ

    July 17, 2024
    Share

    ಕಟಪಾಡಿ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.16 ರಂದು ನಡೆದಿದೆ.ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ ಬಳಿ ಇದ್ದ ಪೊಲೀಸರು ತಪಾಸಣೆಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಹರೀಶ್ ತಮ್ಮ ಕಾರನ್ನು ನಿಲ್ಲಿಸಿದ ವೇಳೆ, ಹಿಂದಿನಿಂದ ಬಂದ ಸ್ವಿಫ್ಟ್ ಕಾರಿನ ಚಾಲಕ ಸುಶಾಂತ್ ತಮ್ಮ ವಾಹನವನ್ನು ದುಡುಕುತನದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಅಪಘಾತದಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆ. ಈ ಪರಿಣಾಮವಾಗಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರು ಮುಂದೆ ನಿಂತಿದ್ದ ಪೊಲೀಸ್ ಅಧಿಕಾರಿ ರಾಮ ಅವರ ಮೇಲೆ ಹತ್ತಿದೆ. ರಾಮ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಯಿತು.ಅಪಘಾತದಲ್ಲಿ ಸ್ವಿಪ್ಟ್ ಕಾರಿನಲ್ಲಿ ಇದ್ದ ಸುಶಾಂತ್, ವಿಷ್ಣು, ಆಶಿಕಾ, ಹಾಗೂ ಹರ್ಷಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅವರನ್ನುಆಸ್ಪತೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಈ ಅಪಘಾತದಿಂದ ಮೂರು ವಾಹನಗಳು ಜಖಂಗೊಂಡಿದ್ದು ಪೊಲೀಸ್ ವರದಿ ಪ್ರಕಾರ ಸ್ವಿಪ್ಟ್ ಕಾರು ಚಾಲಕ ಸುಶಾಂತ್ ಅವರು ತೀವ್ರ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    Post Views: 194

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.