ಮಂಗಳೂರು: ನಗರದ ಬಂದರಿನಲ್ಲಿ ಕಾರು ಹಾಗೂ ಅಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಸಬಾ ಬೆಂಗ್ರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಶಾಹೀದಾ ಅವರು ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್ನಲ್ಲಿ ಈ ಅಪಘಾತ ನಡೆದಿತ್ತು. ಅಕ್ಟೀವಾ – ಕಾರು ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕಿ ಶಾಹೀದಾ ಮೃತಪಟ್ಟಿದ್ದಾರೆ.
ಮೂಲತಃ ಪುತ್ತೂರಿನ ಪರ್ಲಡ್ಕ ಸಮೀಪದ ಕುಂಜೂರು ನಿವಾಸಿಯಾಗಿದ್ದ ಪ್ರಸ್ತುತ ಬೆಂಗ್ರೆ ನಿವಾಸಿಯಾಗಿರುವ ಬಹುಃ ಕೆ.ಪಿ.ಇಸ್ಮಾಯಿಲ್ ಉಸ್ತಾದ್ ರವರ ಮಗಳು. ಉಳ್ಳಾಲ ಪೊಲೀಸ್ ಠಾಣೆಯ ASI ಮುಹಮ್ಮದ್ ಅವರ ಪತ್ನಿಯಾಗಿರುವ ಶಾಹಿದಾ ಒಬ್ಬ ಪುತ್ರ ಮತ್ತು ಇಬ್ಬರು ಹೆಣ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು ಇತ್ಯಾದಿಯಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದರು.ಮಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ಇವರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಿದ್ದರು.