Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆಗೆ ಮರಳುತ್ತಿದ್ದ ವೇಳೆ ದುರಂತ: ಬೈಕ್ ಅಪಘಾತದಲ್ಲಿ 10 ವರ್ಷದ ಬಾಲಕಿ ಸಾವು
    ಇತ್ತೀಚಿನ ಸುದ್ದಿ

    ಮನೆಗೆ ಮರಳುತ್ತಿದ್ದ ವೇಳೆ ದುರಂತ: ಬೈಕ್ ಅಪಘಾತದಲ್ಲಿ 10 ವರ್ಷದ ಬಾಲಕಿ ಸಾವು

    June 5, 2026
    Share

    ಬಂಟ್ವಾಳ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪದ ಸೂರಿಕುಮೇರಿನಲ್ಲಿ ಬುಧವಾರ ಸಂಜೆ ನಡೆದಿದೆ.ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ.ಹೇಮಂತ್ ಅವರು ತಮ್ಮ ಪತ್ನಿ, ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೂರಿಕುಮೇರು ಸಮೀಪ ತಲುಪುತ್ತಿದ್ದಂತೆ ಎದುರಿನಿಂದ ಬಂದ ಸ್ಕೂಟರ್ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ನೈರುತಿ ಕಾಂಕ್ರೀಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರಿಗೆ ಆಕೆ ಕೊನೆಯುಸಿರೆಳೆದಿದ್ದಾಳೆ.ಮೃತ ನೈರುತಿ ಸ್ಥಳೀಯ ಪ್ರಾಥಮಿಕ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಭಜನಾ ಗಾಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಆಕೆ, ಭಜನೆ ತರಬೇತಿಯನ್ನೂ ಪಡೆಯುತ್ತಿದ್ದಳು ಎನ್ನಲಾಗಿದೆ.ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸ್ ಉಪನಿರೀಕ್ಷಕ ಆದರ್ಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

    Post Views: 140

    dakshina kannada karnataka

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.