Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆ ಹಿಂಭಾಗ ಆಕಸ್ಮಿಕ ಬೆಂಕಿ,  ₹4 ಲಕ್ಷಕ್ಕೂ ಅಧಿಕ ನಷ್ಟ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆ ಹಿಂಭಾಗ ಆಕಸ್ಮಿಕ ಬೆಂಕಿ,  ₹4 ಲಕ್ಷಕ್ಕೂ ಅಧಿಕ ನಷ್ಟ

    July 20, 2026
    Share

    ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಗೆ ಹೊಂದಿಕೊಂಡಿದ್ದ ಮನೆ ಹಿಂಭಾಗ ಹಾಗೂ ಹಸುವಿನ ಕೊಟ್ಟಿಗೆಗೆ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

    ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಮನೆಯ ಹಿಂಭಾಗ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ ಸಂಭವಿಸಿಲ್ಲ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು.

    ಅಗ್ನಿ ಅವಘಡದಲ್ಲಿ ಸುಮಾರು ₹4 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಕರಣಿಕರ ಸಹಾಯಕರು ಹಾಗೂ ಮಾಜಿ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 83

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.