Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಪರವಾನಿಗೆ ಇಲ್ಲದೆ ಕಾರುಗಳನ್ನು ಬಾಡಿಗೆಗೆ ನೀಡಿದ ಆರೋಪ; ಆರೋಪಿಯ ವಿರುದ್ಧ ಕೇಸು ದಾಖಲು
    Uncategorized

    ಉಡುಪಿ: ಪರವಾನಿಗೆ ಇಲ್ಲದೆ ಕಾರುಗಳನ್ನು ಬಾಡಿಗೆಗೆ ನೀಡಿದ ಆರೋಪ; ಆರೋಪಿಯ ವಿರುದ್ಧ ಕೇಸು ದಾಖಲು

    October 16, 2025
    Share

    ಮಲ್ಪೆ: ಪರ್ಮಿಟ್‌ ಪಡೆಯದೆ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಡಿಗೆಗೆ ನೀಡುತ್ತಿದ್ದ 18 ವಿವಿಧ ಮಾದರಿಯ ವೈಟ್‌ ಬೋರ್ಡ್‌ ಕಾರುಗಳನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

    ಸಂಬಂಧಪಟ್ಟ ಪ್ರಾಧಿಕಾರದಿಂದ ಅಧಿಕೃತ ಪರವಾನಿಗೆಯನ್ನು ಪಡೆಯದೆ ಮಲ್ಪೆ ಮತ್ತು ಉಡುಪಿ ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ವೈಟ್‌ ಬೋರ್ಡ್‌ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವ ಬಗ್ಗೆ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್‌ ಆ್ಯಂಡ್‌ ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನಿನ ಮಲ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್‌ ಉಪನಿರೀಕ್ಷಕರು ಮತ್ತು ಸಿಬಂದಿ ತೆಂಕನಿಡಿಯೂರು ಗ್ರಾಮದ ಬೆಳ್ಕಲೆ ಹಿರಣ್ಯಧಾಮ ಲೇಔಟ್‌ ಎಂಬಲ್ಲಿ ಆರ್‌.ರಶೀದ್‌ ಎಂಬವರ ಮನೆಯ ಬಳಿ ಇದ್ದ ಕಾರುಗಳ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ 18 ವಿವಿಧ ಮಾದರಿಯ ವೈಟ್‌ ಬೋರ್ಡ್‌ ಕಾರುಗಳು ನಿಲ್ಲಿಸಿರುವುದು ಕಂಡು ಬಂದಿತ್ತು. ಈ ಬಗ್ಗೆ ಆರ್‌. ರಶೀದ್‌ ಅವರನ್ನು ವಿಚಾರಿಸಿದಾಗ, ಆತ ಈ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವುದಾಗಿ ಒಪ್ಪಿಕೊಂಡಿದ್ದರು. ಇಷ್ಟೆಲ್ಲಾ ಕಾರುಗಳನ್ನು ಬಾಡಿಗೆ ನೀಡಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪರ್ಮಿಟ್‌ ಇದೆಯೇ ಎಂದು ವಿಚಾರಿಸಿದಾಗ ಪರ್ಮಿಟ್‌ ಇರುವುದಿಲ್ಲ ಎಂದು ತಿಳಿಸಿರುತ್ತಾರೆ. ಹಾಗಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪರ್ಮಿಟ್‌ ನ್ನು ಪಡೆಯದೆ ವೈಟ್‌ ಬೋರ್ಡ್‌ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವ ಆರೋಪದ ಮೇಲೆ ಆರ್. ರಶೀದ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 119

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.