ವಂಚನೆ ಪ್ರಕರಣವೊಂದರಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ: 406, 420 ಐಪಿಡಿ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶ್ರೀಶೈಲ ಅವರು ಡಿ. 18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




