ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್ಟಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಎಂಬವರ ಮೇಲೆ ಜೂ.4ರಂದು ರಾತ್ರಿ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)