Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಅಡಿಕೆ ಕಳವು ಆರೋಪಿಯ ಸೆರೆ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಅಡಿಕೆ ಕಳವು ಆರೋಪಿಯ ಸೆರೆ

    January 1, 2023
    Share

    ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

    ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ ನಿವಾಸಿ ಮಂಜುನಾಥ ಭೋವಿ(50) ಬಂಧಿತ ಆರೋಪಿಯಾಗಿದ್ದಾನೆ.

    ಈತನಿಂದ 105 ಕೆ.ಜಿ. ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೋಳಂಗಡಿ ನಿವಾಸಿ ಐವನ್ ಥೋರಸ್ ಎಂಬವರು ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಅಡಿಕೆ ಒಣಗಲು ಹಾಕಿದ್ದರು. ಡಿ.24 ಮತ್ತು ಡಿ.29ರ ಮಧ್ಯದ ಅವಧಿಯಲ್ಲಿ ಇದರಿಂದ 100-120 ಕೆ.ಜಿ ಅಡಿಕೆಯನ್ನು ಯಾರೋ ಕಳವುಗೈದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಡಿ.30ರಂದು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಮಂಜುನಾಥ ಭೋವಿ ವಿರುದ್ಧ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 165

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.