Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುವ ವೇಳೆ ಪರಾರಿ ಯತ್ನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುವ ವೇಳೆ ಪರಾರಿ ಯತ್ನ

    November 3, 2022
    Share

    ಬಂಟ್ವಾಳ: ಆರೋಪಿಯೋರ್ವನನ್ನು ಜಿಲ್ಲಾ ಕಾರಾಗೃಹಕ್ಕೆ ಬಸ್‌ನಲ್ಲಿ ಪೊಲೀಸರು ಕರೆದುಕೊಂಡು ಹೋಗುವ ವೇಳೆ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.

    2003 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕಳ್ಳಿಗೆ ನಿವಾಸಿ ಗಿರೀಶ್ ಯಾನೆ ಗಿರಿಧರ್ ಆರೋಪಿ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ತಲೆಮರೆಸಿಕೊಳ್ಳಲು ಯತ್ನಿಸಿದ ಕಾರಣಕ್ಕಾಗಿ ಈತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. 2003ರಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರಿಧರ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯದ ಅದೇಶದಂತೆ ಪೋಲೀಸರು ಈತನನ್ನು ಪತ್ತೆ ಹಚ್ಚಿ ನ್ಯಾಯಾಲಯ ಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನಿಗೆ ಶಿಕ್ಷೆ ಪ್ರಕಟಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸುವ ಸಲುವಾಗಿ ಕೈದಿಯನ್ನು ಸರ್ಕಾರಿ ಬಸ್ ನಲ್ಲಿ ಇಬ್ಬರು ಪೋಲೀಸರು ಬಿಸಿರೋಡಿನಿಂದ ಮಂಗಳೂರಿಗೆ ಸುಮಾರು 6.30 ಗಂಟೆಗೆ ಕರೆದುಕೊಂಡು ಹೋಗುವ ವೇಳೆ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಬಸ್ ನಿಧಾನವಾಗುತ್ತಿದ್ದಂತೆ, ನಿರ್ವಾಹಕನಿಗೆ ವಾರೆಂಟ್ ನೀಡುತ್ತಿರುವ ಸಮಯವನ್ನು ಉಪಯೋಗಿಸಿ ಆರೋಪಿ ಪೋಲೀಸರನ್ನು ಬಸ್‌ನೊಳಗೆ ದೂಡಿ ಹಾಕಿ ಬಸ್‌ನಿಂದ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಕೂಡಲೇ ಮಿಂಚಿನ ವೇಗದಲ್ಲಿ ಪೋಲೀಸರು ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಈತನನ್ನು ಬಂಧಿಸಿದ್ದಾರೆ. ಆರೋಪಿ ಬೆಂಗಾವಲು ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಲು ಯತ್ನಿಸಿದಕ್ಕಾಗಿ ಈತನ‌ ಮೇಲೆ ಪ್ರಕರಣ ದಾಖಲಾಗಿದೆ.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.