Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»5 ವರ್ಷದ ಬಾಲಕಿ ಕೊಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ
    ಇತ್ತೀಚಿನ ಸುದ್ದಿ

    5 ವರ್ಷದ ಬಾಲಕಿ ಕೊಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

    April 14, 2025
    Share

    ಹುಬ್ಬಳ್ಳಿ: ಇಲ್ಲಿ ನಡೆದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

    ಹುಬ್ಬಳ್ಳಿ ಅಶೋಕ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರಿ ಮೂಲದ ವ್ಯಕ್ತಿಯೊಬ್ಬ ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

    ಇನ್ನೂ ಈ ಘಟನೆ ಖಂಡಿಸಿ ಜನ ಆರೋಪಿಯನ್ನು ಹಿಡಿದು ನಮ್ಮ ಕೈಗೆ ಕೊಡಿ ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆಯಿಂದಲೇ ಹೋರಾಟ ನಡೆಯುತ್ತಲೇ ಇತ್ತು.

    ಇತ್ತ ಪೊಲೀಸರು ಆರೋಪಿಯನ್ನು ಹಿಡಿಯಲು ಮುಂದಾಗಿದ್ರು ಈ ವೇಳೆ ಆರೋಪಿ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ.

    ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ವಿಜಯನಗರ ಬಳಿ ಮಗು ಮಿಸ್ ಆಗಿದೆ ಎಂದು ಮಾಹಿತಿ ಇತ್ತು. ಪ್ರಕರಣದ ಆರೋಪಿ ಬಿಹಾರ ಮೂಲದ ಪಾಟ್ನಾದವನು. ಹುಬ್ಬಳ್ಳಿ ತಾರಿಹಾಳರ ಬಳಿ ಮನೆ ಮಾಡಿಕೊಂಡಿದ್ದ. ಆರೋಪಿ ನಮ್ಮ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ. ಮಹಿಳಾ ಪೊಲೀಸ್ ಅಧಿಕಾರಿ ಏರ್ ಫೈಯರ್‌ ಮಾಡಿದ್ದರು. ಆತ ಓಡಿ ಹೋಗುವಾಗ ಎರಡು ಗುಂಡು ಆತನ ಮೇಲೆ ಹಾರಿಸಲಾಗಿತ್ತು. ಆಗ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಿದ್ದರು. ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪಿಎಸ್‌ಐ ಅನ್ನಪೂರ್ಣ ಹಾಗೂ ಇಬ್ಬರು ಸಿಬ್ಬಂದಿಗೆ ಗಾಯವಾಗಿದೆ. ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

    Post Views: 243

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.