Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಗ್ರರಿಗೆ ನೆರವು ನೀಡಿದ ಆರೋಪ : ‘NIA’ ತನಿಖೆ ವೇಳೆ, ಬಂಧಿತ ವೈದ್ಯನ ಕರ್ಮಕಾಂಡ ಬಯಲು
    ಇತ್ತೀಚಿನ ಸುದ್ದಿ

    ಉಗ್ರರಿಗೆ ನೆರವು ನೀಡಿದ ಆರೋಪ : ‘NIA’ ತನಿಖೆ ವೇಳೆ, ಬಂಧಿತ ವೈದ್ಯನ ಕರ್ಮಕಾಂಡ ಬಯಲು

    July 9, 2025
    Share

    ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ.

    ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ.

    ಇದೀಗ ಬೆಂಗಳೂರಿನಲ್ಲಿ ಜೈಲಿನಲ್ಲಿರುವ ಉಗ್ರರಿಗೆ ನೆರವು ನೀಡಿದ ಆರೋಪ ಹಿನ್ನೆಲೆ ಎನ್ಐಎ ಅಧಿಕಾರಿಗಳ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ವೈದ್ಯ ನಾಗರಾಜ್ ಕರ್ಮಕಾಂಡ ಬಯಲಾಗಿದೆ. ಸಹಾಯಕಿ ಪವಿತ್ರಗಳನ್ನು ಬಳಸಿಕೊಂಡು ಜೈಲಿಗೆ ಮೊಬೈಲ್ ಗಳನ್ನು ಪೂರೈಕೆ ಮಾಡುತ್ತಿದ್ದ ಜೈಲಿನಲ್ಲಿರುವ ಕೈದಿಗಳಿಗೆ ವೈದ್ಯ ನಾಗರಾಜ್ ಮೊಬೈಲ್ ಮಾರಾಟ ಮಾಡುತ್ತಿದ್ದ.

    ಕೇವಲ 10 ಸಾವಿರ ಮೊಬೈಲ್ಗೆ 50,000 ಕ್ಕೆ ಮಾರಾಟ ಮಾಡುತ್ತಿದ್ದ ನಾಗರಾಜ್ ಶಂಕಿತ ಉಗ್ರರು, ಡ್ರಗ್ ಪೆಡ್ಲರ್ ಮತ್ತು ರೌಡಿಶೀಟರ್ ಗಳಿಗೆ ನಾಗರಾಜ್ ಮೊಬೈಲ್ ಸಪ್ಲೈ ಮಾಡುತ್ತಿದ್ದ. ನೂರಾರು ಮಂದಿಗೆ ವೈದ್ಯ ನಾಗರಾಜ್ ಮೊಬೈಲ್ ಸಪ್ಲೈ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವೈದ್ಯಕೀಯ ಕೆಲಸ ಬಿಟ್ಟು ನಾಗರಾಜ್ ಮೊಬೈಲ್ ಮಾರಾಟ ಮಾಡುತ್ತಿದ್ದ. ಈ ಹಿಂದೆ ಸಿಸಿಬಿ ಅಧಿಕಾರಿಗಳು ಶಂಕಿತ ಉಗ್ರರ ಮನೆಯ ಮೇಲೆ ದಾಳಿ ಮಾಡಿದ್ದರು. ಸುಲ್ತಾನ್ ಪಾಳ್ಯ ಭದ್ರಪ್ಪ ಲೇಔಟ್ ನಲ್ಲಿ ಸಿಸಿಬಿ ತಂಡ ದಾಳಿ ಮಾಡಿತ್ತು.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.