Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕನ ಹತ್ಯೆ, ಕರೆಂಟ್ ಶಾಕ್ ಎಂದು ನಾಟಕ – ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಹತ್ಯೆ, ಕರೆಂಟ್ ಶಾಕ್ ಎಂದು ನಾಟಕ – ಆರೋಪಿ ಅರೆಸ್ಟ್

    July 9, 2023
    Share

    ಮಂಗಳೂರು: ತನ್ನ ಬಳಿ ನೌಕರಿಗಿದ್ದ ಯುವಕನೊಬ್ಬನನ್ನು ಬೆಂಕಿ ಹಚ್ಚಿ ಸುಟ್ಟು ಹತ್ಯೆ ಮಾಡಿ, ಕರೆಂಟ್ ಶಾಕ್ ನಿಂದ ಸತ್ತಿದ್ದಾನೆಂದು ನಾಟಕವಾಡಿರುವ ಘಟನೆ ನಗರದ ಮುಳಿಹಿತ್ಲು ಎಂಬಲ್ಲಿ ನಡೆದಿದೆ. ಮುಳಿಹಿತ್ಲು ಜಂಕ್ಷನ್ ನಲ್ಲಿ ಮಶುಪಾ ಜನರಲ್ ಸ್ಟೋರ್ ನಲ್ಲಿ ಕೆಲಸಕ್ಕಿದ್ದ ಗಟ್ಯಾನ್ ಥಿ ಜಗು ಎಂಬಾತ ಕೊಲೆಯಾದ ದುರ್ದೈವಿ. ಪಾಂಡೇಶ್ವರದ ತೌಲಿನ್ ಹಸನ್ (32) ಹತ್ಯೆಗೈದ ಆರೋಪಿ. ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿರುವ ಮಶುಪಾ ಜನರಲ್ ಸ್ಟೋರ್ ನಲ್ಲಿ ಈತ ಕೆಲಸಕ್ಕಿದ್ದ. ತೌಲಿನ್ ಹಸನ್ ಆತನಿಗೆ ಅದೇ ಕಟ್ಟಡದ ಹಿಂದೆ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಬೆಳಗ್ಗೆ 8:30 ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಆತನನ್ನು ಬೆಂಕಿ ಕೊಟ್ಟು ಸುಟ್ಟಿದ್ದಾನೆ. ಬಳಿಕ ಸಾಕ್ಷಿ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಆಘಾತವಾಗಿದ್ದಾಗಿ ಸ್ಥಳೀಯರಿಗೂ, ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದಾನೆ. ಬೆಂಕಿ ಹಚ್ಚಲ್ಪಟ್ಟು ಗಂಭೀರ ಗಾಯಗೊಂಡಿದ್ದ ಗಟ್ಯಾನ್ ಥಿ ಜಗು ನನ್ನು ವೆನ್ನಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕರೆದುಕೊಂಡು ಹೋದಾಗ ಆತನನ್ನು ಪರೀಕ್ಷಿಸಿದ ವೈದ್ಯಾಧಿಕಾರಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮಂಗಳೂರು ದಕ್ಷಿಣ ಪೊಲೀಸರು ತನಿಖೆಯನ್ನು ಆರಂಭಿಸಿ ಪರಿಸರದ ಸಾರ್ವಜನಿಕರನ್ನು ವಿಚಾರಿಸಿದಾಗ ಸಾಕ್ಷ್ಯಗಳು ಲಭ್ಯವಾಗಿದ್ದು ಇದೊಂದು ಕೊಲೆ ಪ್ರಕರಣವೆಂದು ದೃಢಪಟ್ಟಿದ್ದು, ಆರೋಪಿ ತೌಸಿಫ್ ಹುಸೈನ್ ಎಂಬಾತನನ್ನು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 227

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.