Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ-6.41 ಲಕ್ಷ ರೂ. ಮೌಲ್ಯದ ಸೊತ್ತು ವಶ..!
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ-6.41 ಲಕ್ಷ ರೂ. ಮೌಲ್ಯದ ಸೊತ್ತು ವಶ..!

    October 21, 2023
    Share

    ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ  ಪಡಿಸಿಕೊಂಡಿದ್ದಾರೆ.

    ಮಂಗಳೂರು ಹೊರ ವಲಯದ ಉಳ್ಳಾಲ ತಾಲೂಕಿನ ನರಿಂಗಾನದ ತೌಡುಗೋಳಿ ನಿವಾಸಿ  ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್‌  (42)ಬಂಧಿತ ಆರೋಪಿ.

    ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಅಬ್ಬುಲ್‌ ಅಝೀಝ್ ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಆತನಿಂದ ಒಟ್ಟು 26 ಗ್ರಾಂ ತೂಕದ 1,30,000 ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಅದನ್ನು ಸಾಗಿಸಲು ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 6,41,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ವೇಳೆ ಕಾರಾಗೃಹ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ಕೂಡಾ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

    Post Views: 227

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.