ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತರರಾಜ್ಯ ಅಪರಾಧಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕೇರಳದ ಮಂಜೇಶ್ವರ ನಿವಾಸಿ ಅಬ್ದುಲ್ ಫೈಸಲ್ (26) ಎಮದು ಗುರುತಿಸಲಾಗಿದೆ.
ಅಬ್ದುಲ್ ಫೈಸಲ್ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದನು. ಪೊಲೀಸರು ಆರೋಪಿಯಿಂದ ಒಂದು ಪಿಸ್ತೂಲ್, ಒಂದು ಜೀವಂತ ಗುಂಡು ಮತ್ತು ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ 2.10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಫೈಸಲ್ ವಿರುದ್ಧ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.