Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ನಟಿ ಅಭಿನಯ ಪತ್ತೆಗೆ “ಲುಕ್‌ಔಟ್‌ ನೋಟಿಸ್‌” ಜಾರಿಗೊಳಿಸಿದ ಪೊಲೀಸರು
    ರಾಜ್ಯ ಸುದ್ದಿ

    ನಟಿ ಅಭಿನಯ ಪತ್ತೆಗೆ “ಲುಕ್‌ಔಟ್‌ ನೋಟಿಸ್‌” ಜಾರಿಗೊಳಿಸಿದ ಪೊಲೀಸರು

    February 10, 2023
    Share

    ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ ಅಭಿನಯ ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ ಜಾರಿಯಾಗಿದೆ.

    ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ಮಾಡಿದ್ದರು. ಅಭಿನಯ ಕುಟುಂಬ ವರದಕ್ಷಿಣೆ ಹಣ ಪಡೆದಿದ್ದಲ್ಲದೆ ಲಕ್ಷ್ಮಿದೇವಿಯವರನ್ನು ಪೋಷಕರ ಮನೆಗೆ ಅಟ್ಟಿದ್ದರು. 80 ಸಾವಿರ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ವರದಕ್ಷಿಣೆ ರೂಪವಾಗಿ ಪಡೆದಿರುವುದು ಕೂಡ ಸಾಬೀತಾಗಿತ್ತು. ಸೆಷನ್ಸ್ ಕೋರ್ಟ್ ಅಭಿನಯ, ತಾಯಿ ಹಾಗೂ ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು.

    ಯಾವಾಗ ಜೈಲು ಶಿಕ್ಷೆ ಪ್ರಕಟವಾಯಿತೋ, ಅಂದಿನಿಂದ ಅಭಿನಯ ಮತ್ತು ಕುಟುಂಬದ ಸದಸ್ಯರು ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಅಭಿನಯ, ಸಹೋದರ ಹಾಗೂ ತಾಯಿ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಕೈಗೆ ಅವರು ಸಿಗದೇ ತಲೆಮರೆಸಿಕೊಂಡಿದ್ದಾರೆ. ಇದೀಗ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಪತ್ತೆಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.

    ಸಾರ್ವಜನಿಕರಿಗೆ ಈ ಎಲ್ಲಾ ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

    Post Views: 182

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.