ಮಂಗಳೂರು: ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು. ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು.
ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.