Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ಯಾನ್- ಆಧಾರ್ ಲಿಂಕ್ ಮಾಡಲು ಇನ್ನೊಂದೇ ದಿನ ಮಾತ್ರ ಬಾಕಿ
    ಇತ್ತೀಚಿನ ಸುದ್ದಿ

    ಪ್ಯಾನ್- ಆಧಾರ್ ಲಿಂಕ್ ಮಾಡಲು ಇನ್ನೊಂದೇ ದಿನ ಮಾತ್ರ ಬಾಕಿ

    June 29, 2023
    Share

    ನವದೆಹಲಿ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಜೋಡಿಸಲು ನಾಳೆ (ಜೂನ್‌ 30) ಕೊನೆಯ ದಿನವಾಗಿದೆ.

    ಪ್ಯಾನ್ ಕಾರ್ಡ್ ಹಾಗೂ ಆಧಾರ್ ಜೋಡಣೆಗೆ ಕೊನೇ ದಿನಾಂಕವನ್ನು ಕೇಂದ್ರ ಹಣಕಾಸು ಇಲಾಖೆಯು ಈ ಹಿಂದೆ ಮಾರ್ಚ್ 31ಕ್ಕೆ ನಿಗದಿ ಮಾಡಿತ್ತು. ಆದರೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರು.

    ಅದರ ಬೆನ್ನಲ್ಲೇ ದಿನಾಂಕವನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿತ್ತು.

    ಪ್ಯಾನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ ₹ 500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ ₹1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ ₹10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಗುಡುವು ವಿಸ್ತರಣೆಯಾದ ಕಾರಣ ಜೂನ್ 30ರವರೆಗೂ ₹1,000 ಶುಲ್ಕದೊಂದಿಗೆ ಆಧಾರ್‌-ಪ್ಯಾನ್‌ ಲಿಂಕ್ ಮಾಡಬಹುದಾಗಿತ್ತು.

    ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ, ಪ್ಯಾನ್‌ ಜತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿತ್ತು.

    ಪ್ಯಾನ್‌-ಆಧಾರ್ ಜೋಡಣೆಗೆ ಆಗ ಸರ್ಕಾರವು ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಜೋಡಣೆ ಕಾರ್ಯಗತವಾಗಲಿಲ್ಲ. ಹೀಗಾಗಿ ಪ್ಯಾನ್‌-ಆಧಾರ್ ಜೋಡಣೆಗೆ ನೀಡಿದ್ದ ಗಡುವನ್ನು ಸರ್ಕಾರವು ಹಲವು ಬಾರಿ ವಿಸ್ತರಿಸಿತ್ತು.

    ಜೂನ್‌ 30ರ ಒಳಗೆ ಪ್ಯಾನ್‌-ಆಧಾರ್ ಜೋಡಿಸದಿದ್ದರೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ), ₹ 10,000 ವಿಧಿಸಲಿದೆ. ಇಲ್ಲವೇ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗಲಿದೆ.

    ಈವರೆಗೆ ಒಟ್ಟು 61 ಕೋಟಿ ಪ್ಯಾನ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ ಶೇ 80ಕ್ಕೂ ಹೆಚ್ಚು ಅಂದರೆ 51 ಕೋಟಿಗೂ ಅಧಿಕ ಪ್ಯಾನ್‌ ಕಾರ್ಡ್‌ಗಳನ್ನು ಆಧಾರ್‌ಗೆ ಜೋಡಿಸಲಾಗಿದೆ.

    Post Views: 246

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.