Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ದುಡುಕಿನ ಹಾಗೂ ಅಪಾಯಕಾರಿ ಚಾಲನೆ ತಡೆಯಲು ಪೊಲೀಸರಿಂದ ಹೊಸ ಉಪಾಯ
    Uncategorized

    ದುಡುಕಿನ ಹಾಗೂ ಅಪಾಯಕಾರಿ ಚಾಲನೆ ತಡೆಯಲು ಪೊಲೀಸರಿಂದ ಹೊಸ ಉಪಾಯ

    July 28, 2024
    Share

    ಬೆಂಗಳೂರು:ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

       ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

       ಶೇ. 90 ರಷ್ಟು ಮಾರಣಾಂತಿಕ ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತದೆ. ಗುರುವಾರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, 155 ವಾಹನಗಳು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದವು. ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ದಾಖಲಿಸಲಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

       ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿರುವ ಅವರು ಓವರ್ ಸ್ಪೀಡಿಂಗ್ ಅನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್ ಎಂದು ಅಳೆಯಲಾಗುತ್ತದೆ.

        ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದರೂ ಕೇಸ್ ಬುಕ್ ಆಗುತ್ತಾರೆ.ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 105 ಕಿ.ಮೀ ವೇಗದಲ್ಲಿ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತದೆ. ಎಫ್‌ಐಆರ್‌ಗಳ ನೋಂದಣಿಗೆ 130 ಕಿಮೀ ಮಿತಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

    Post Views: 248

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.