Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪಘಾತದ ಗಾಯಾಳುವನ್ನು ಸ್ಕೂಟಿಯಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್ – ಕಮಿಷನರ್ ಶ್ಲಾಘನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪಘಾತದ ಗಾಯಾಳುವನ್ನು ಸ್ಕೂಟಿಯಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್ – ಕಮಿಷನರ್ ಶ್ಲಾಘನೆ

    October 24, 2024
    Share

    ಮಂಗಳೂರು: ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್‌ಅಪ್ ವಾಹನ ಹಾಗೂ ಕಂಟೈನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿತ್ತು. ಲಾರಿಯ ಕ್ಲೀನ‌ರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.