Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೈಲಿನಲ್ಲಿ ಹೃದಯಾಘಾತ: ವಕೀಲ ಕೆ.ಪಿ. ಜೇಮ್ಸ್ ನಿಧನ
    ಇತ್ತೀಚಿನ ಸುದ್ದಿ

    ರೈಲಿನಲ್ಲಿ ಹೃದಯಾಘಾತ: ವಕೀಲ ಕೆ.ಪಿ. ಜೇಮ್ಸ್ ನಿಧನ

    February 17, 2023
    Share

    ಪುತ್ತೂರು: ರೈಲಿನಲ್ಲಿ ಸಂಚರಿಸುತ್ತಿರುವ ಸಂದರ್ಭ ಹೃದಯಾಘಾತದಿಂದ ವಕೀಲರೊಬ್ಬರು ಸಾವನಪ್ಪಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.
    ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್ ಅವರು ತಮಿಳುನಾಡು ಕಡೆ ತೆರಳುತ್ತಿದ್ದ ಮಲಬಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆ.ಪಿ.ಜೇಮ್ಸ್ ಅವರು ಪತ್ನಿಯೊಂದಿಗೆ ಚೆಂಗನೂರಿನ ಧಾರ್ಮಿಕ ಕ್ಷೇತ್ರಕ್ಕೆ ರೈಲಿನಲ್ಲಿ ತೆರಳುತ್ತಿದ್ದರು. ಹವಾನಿಯಂತ್ರಿತ ಕೋಚ್‌ನಲಿದ್ದ ಅವರು ರಾತ್ರಿ ವೇಳೆ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದರು. ಜೇಮ್ಸ್‌ ವಾಪಸ್‌ ಬರದ ಕಾರಣ ಅವರ ಪತ್ನಿ ಹುಡುಕಾಡಿದ್ದಾರೆ. ಎಲ್ಲೂ ಕಾಣದಿದ್ದಾಗ ಕಿರುಚಾಡಿದ್ದಾರೆ.

    ವ್ಯಕ್ತಿಯೊಬ್ಬರು ರೈಲಿನಿಂದ ಕೆಳಗೆ ಬಿದ್ದಿರುವ ವಿಚಾರವನ್ನು ರೈಲಿನಲ್ಲಿದ್ದ ಪ್ರಯಾಣಿಕರು ಅವರ ಗಮನಕ್ಕೆ ತಂದರು. ಈ ಮಧ್ಯೆ ತಲ್ವೇರಿ ಬಳಿಯ ಧರ್ಮಡಮ್ ಎಂಬಲ್ಲಿ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಜೇಬಿನಲ್ಲಿ ಗುರುತುಚೀಟಿ ಮತ್ತು ಭಾವಚಿತ್ರ ಆಧರಿಸಿ ಅದು ಕೆ.ಪಿ. ಜೇಮ್ಸ್ ಅವರದ್ದು ಎಂದು ಶಂಕಿಸಲಾಗಿತ್ತು. ಬಳಿಕ ಸಂಬಂಧಿಕರು ಸ್ಥಳಕ್ಕೆ ತೆರಳಿ ದೃಢಪಡಿಸಿದ್ದಾರೆ. ಕೆ.ಪಿ. ಜೇಮ್ಸ್ ದಂಪತಿ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಚೆಂಗಣ್ಣೂರಿಗೆ ತೆರಳುತ್ತಿದ್ದ ಲಾವತ್ತಡ್ಕದ ಅಬ್ರಾಹಂ ತೋಮಸ್ ಎಂಬುವರು ಇದ್ದರು. ರಾತ್ರಿ ವೇಳೆ ಮಹಿಳೆ ಕಿರುಚಾಡಿದ್ದನ್ನು ಗಮನಿಸಿದ ಅವರು ವಿಚಾರಿಸಿದ ವೇಳೆ ಪುತ್ತೂರಿನವರೆಂದು ಗೊತ್ತಾಗಿದೆ. ಬಳಿಕ ಅವರು ಕೊಝಿಕ್ಕೊಡ್‌ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿ, ಜೇಮ್ಸ್ ಅವರ ಪತ್ನಿಯನ್ನು ರೈಲಿನಿಂದ ಇಳಿಸಿ ಅವರ ಸಂಬಂಧಿಕರ ಮನೆಗೆ ಕಳುಹಿಸಿದ್ದರು.

    Post Views: 179

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.