Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಕೀಲ ರಾಜೇಶ್ ಪ್ರಕರಣ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ವಕೀಲ ರಾಜೇಶ್ ಪ್ರಕರಣ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾವಣೆ

    February 29, 2024
    Share

    ಮಂಗಳೂರು: ನಗರದ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶಿಸಿದೆ. ಕೆಎಸ್‌ಎನ್ ರಾಜೇಶ್ ತನ್ನ ಕಚೇರಿಯಲ್ಲಿದ್ದ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸಿಪಿಯಾಗಿದ್ದ ರಂಜಿತ್ ಕುಮಾರ್ ಭಂಡಾರು ಅವರು ಕೆಎಸ್‌ಎನ್ ರಾಜೇಶ್, ಆತ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಬೋಂದೆಲ್ ನಿವಾಸಿ ಅನಂತ್ ಭಟ್, ಬೆಂಗಳೂರು ನಿವಾಸಿ ಆದಿತ್ಯ ಕೆ.ಬಿ. ಮತ್ತು ರಾಜೇಶ್ ಪತ್ನಿ ಶಶಿಕಲಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ಒಟ್ಟು 110 ಸಾಕ್ಷಿಗಳನ್ನು ವಿಚಾರಿಸಿ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣ ಪಟ್ಟಿಯನ್ನು ಎಸಿಪಿ ದಿನಕರ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆಎಸ್‌ಎನ್ ರಾಜೇಶ್ ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಗೊಳಿಸುವಂತೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರಿಟ್ ಅರ್ಜಿಯನ್ನು ವಜಾಗೊಳಿಸಿ ಪ್ರಕರಣವು ವಿಚಾರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕು ಎಂದು ಆದೇಶಿಸಿದ್ದರು. ಇದೊಂದು ಘೋರ ಪ್ರಕರಣವಾಗಿದ್ದು ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕಾದ ಕಾರಣ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ತಾರಾ ಅವರು ಆದೇಶಿಸಿದ್ದಾರೆ.

    Post Views: 243

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.