Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ
    ಇತ್ತೀಚಿನ ಸುದ್ದಿ

    ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ

    February 8, 2024
    Share

    ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಚ್ಚಿನ ಪರಿಶೀಲನೆಗಾಗಿ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ತನಿಖೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ ನೀಡಿದ್ದು, ತನಿಖೆ ಚುರುಕುಗೊಂಡಿದೆ.

    ಘಟನೆ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಮಾತನಾಡಿ ’ನಿನ್ನೆ ದಿನ ರಾತ್ರಿ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಕರ್ನಾಟಕ ಬ್ಯಾಂಕ್‌ನಲ್ಲಿ ಲಾಕರ್‌ ಮುರಿದು ಕಳ್ಳತನವಾಗಿದೆ. ಇದೀಗ ವಿಧಿವಿಧಾನ ತಜ್ಞರು ತನಿಖೆ ಮುಂದುವರೆಸಿದ್ದಾರೆ. ಬ್ಯಾಂಕಿನ ಭದ್ರತಾ ಸಿಸ್ಟಮ್‌ ತುಂಬಾ ದುರ್ಬಲವಾಗಿದೆ. ಲಾಕರ್‌ ಫೆಸಿಲಿಟಿಗಳೆಲ್ಲವೂ ತುಂಬಾ ಭದ್ರವಾಗಿರಬೇಕು. ಇದಕ್ಕೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳನ್ನು ಎಲ್ಲಾ ಬ್ಯಾಂಕ್‌ಗಳು ಮಾಡಬೇಕು. ಬ್ಯಾಂಕಿನ ಹಿಂದಿನ ಕಿಟಕಿಯ ರಾಡನ್ನು ಎಕ್ಸೆರ್‍ ಬ್ಲೇಡ್ ಮೂಲಕ ಮುರಿದು ಒಳನುಗ್ಗಿದ ದರೋಡೆಕೋರರು ಬ್ಯಾಂಕ್‌ನ ಲಾಕರ್‌ನ್ನು ಗ್ಯಾಸ್‌ ಕಟ್ಟರ್‌ ಉಪಯೋಗಿಸಿ ಲಾಕರ್‌ ಮುರಿದಿದ್ದಾರೆ ಎಂದು ಹೇಳಿದರು. ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿ ಬೀಳುವಂತ ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ರಾಬರಿ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.