Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!
    ಇತ್ತೀಚಿನ ಸುದ್ದಿ

    ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!

    June 17, 2025
    Share

    ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ನಡೆದಿದೆ.

    ಮೃತಪಟ್ಟ ಬಾಲಕಿಯನ್ನು ಓಣಿಬಾಗಿಲು ವಿನ ಮುಹಮ್ಮದ್ – ಖದೀಜತ್ ಕುಬ್ರಾ ದಂಪತಿ ಪುತ್ರಿ ಫಾತಿಮಾ ಹಿಬಾ ಎಂದು ಗುರುತಿಸಲಾಗಿದೆ.

    ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಹಪಾಠಿಗಳ ಜೊತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ. ಜೊತೆಗಿದ್ದ ಮಕ್ಕಳ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ಮೇಲಕ್ಕೆತ್ತಿ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.

    ಬಾಲಕಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ಬಾಲಕಿ ಬಾಡೂರು ಪದವು ಎ. ಎಲ್. ಪಿ ಶಾಲೆಯ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

    Post Views: 157

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.