Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್
    ಇತ್ತೀಚಿನ ಸುದ್ದಿ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್

    September 18, 2026
    Share

    ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮಾಜಿ ಜಿಲ್ಲಾ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ.

    ಏನಿದು ಪ್ರಕರಣ?
    ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿರುವ ಮನೀಷ್ ಕುಲಾಲ್ ಅವರ ತಂದೆ ಆನಂದ್ ಎಸ್. ಅವರು 2023ರ ನವೆಂಬರ್ 10ರಂದು ಅಜಿತ್ ರೈ ಹೊಸಮನೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ದೂರಿನ ಪ್ರಕಾರ, ಅಜಿತ್ ರೈ ಹೊಸಮನೆ ಅವರು ಮಧ್ಯಾಹ್ನದ ವೇಳೆ ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ತಮ್ಮ ಮಗನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಗನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನು ದೊಡ್ಡದು ಮಾಡುವುದು ಬೇಡ ಎಂಬ ಕಾರಣಕ್ಕೆ ಮಕ್ಕಳು ಆರಂಭದಲ್ಲಿ ತನಗೆ ಮಾಹಿತಿ ನೀಡಿರಲಿಲ್ಲ, ಬಳಿಕ ಮತ್ತೆ ಮಗನ ಮೇಲೆ ಹಲ್ಲೆ ಹಾಗೂ ಹತ್ಯೆಗೆ ಸಂಚು ನಡೆದಿದೆ ಎಂಬ ಆತಂಕ ಉಂಟಾಗಿದ್ದು ಇದರ ಹಿಂದೆ ಅಜಿತ್ ರೈ ಅವರ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ಅಕ್ರಮವಾಗಿ ಮನೆ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ತೊಂದರೆ ನೀಡುತ್ತಿರುವ ಅಜಿತ್ ರೈ ಹೊಸಮನೆ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆನಂದ್ ಎಸ್. ಅವರು ಪೊಲೀಸರಿಗೆ ಮನವಿ ಮಾಡಿದ್ದರು.

    ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು:
    ದೂರು ಆಧರಿಸಿ ನವೆಂಬರ್ 11ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಭಾರತೀಯ ದಂಡ ಸಂಹಿತೆಯ (IPC) ಕಲಂ 447, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಪ್ರಕರಣ ರದ್ದುಪಡಿಸುವಂತೆ ಕೋರಿ ಅಜಿತ್ ರೈ ಹೊಸಮನೆ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಕರಣವನ್ನು ವಜಾಗೊಳಿಸಿ ಆದೇಶ ನೀಡಿದೆ.

    Post Views: 11

    Related Posts

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್

    September 18, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.