ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಇದರೊಂದಿಗೆ 8,69,950 ರೂ. ಮೌಲ್ಯದ 15.5 ಕೆ.ಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಒಟ್ಟು 243 ಎಫ್ಐಆರ್ ಕೇಸ್ಗಳು ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.