Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಗಸದಲ್ಲೇ ಆಲಿಕಲ್ಲು ಹೊಡೆತ- ವಿಮಾನ ಜಖಂ
    ಇತ್ತೀಚಿನ ಸುದ್ದಿ

    ಆಗಸದಲ್ಲೇ ಆಲಿಕಲ್ಲು ಹೊಡೆತ- ವಿಮಾನ ಜಖಂ

    May 22, 2025
    Share

    ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲೇ ಆಲಿಕಲ್ಲು ಹೊಡೆದ ಪರಿಣಾಮ ವಿಮಾನದ ಮುಂಭಾಗ ಜಖಂಗೊಂಡ ಘಟನೆ ನಡೆದಿದ್ದು, 227 ಮಂದಿ ಪ್ರಯಾಣಿಕರಿದ್ದ ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

    ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಮಂಗಳವಾರ ಸಂಜೆ ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿತು. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ (ಎಟಿಸಿ) ದೊಂದಿಗೆ ತುರ್ತು ಪರಿಸ್ಥಿತಿ ಘೋಷಿಸಿದರು.

    6E2142 ವಿಮಾನವು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್‌ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
    ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ‌ ಸೇಫ್ ಆಗಿದ್ದಾರೆ. ಪೈಲಟ್‌ಗಳ‌ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ‌ ಹಾನಿಗೀಡಾಗಿದ್ದು, ಈ ಹಾನಿಯನ್ನು ನೋಡಿದವರು ಪ್ರಯಾಣಿಕರು ಪವಾಡಸದೃಶರಾಗಿ ಬದುಕುಳಿದಿದ್ದಾರೆ ಎನ್ನುವಷ್ಟು ಗಂಭೀರ ಪ್ರಮಾಣದಲ್ಲಿ ವಿಮಾನ ಹಾನಿಗೊಳಗಾಗಿದೆ.

    Post Views: 175

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.